ಬಾಹುಬಲಿ-2ರ ಕರ್ನಾಟಕ ಬಿಡುಗಡೆಗೆ ಕಂಟಕ

ಮೈಸೂರು:  ಬಹುನಿರೀಕ್ಷಿತ ಚಿತ್ರ ಬಾಹುಬಲಿ-2ಗೆ ಚಿತ್ರದ ಕರ್ನಾಟಕದ ಬಿಡುಗಡೆಗೆ ಕಂಟಕ ಎದುರಾಗಿದ್ದು, ಈ ಚಿತ್ರವನ್ನು ಪ್ರದರ್ಶನ ಮಾಡುವುದಕ್ಕೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

ಕಾವೇರಿ ಜಲ ವಿವಾದ ಕುರಿತಂತೆ ಬಾಹುಬಲಿಯ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಸ್ವಾಭಿಮಾನ ಕೆಣಕಿದ್ದಾರೆ ಎಂದು ಕನ್ನಡ ಪರ ಸಂಘಟನೆಗಳು ಆರೋಪಿಸಿವೆ. ಈ ಹಿನ್ನೆಲೆಯಲ್ಲಿ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಅಡ್ಡಿಪಡಿಸುತ್ತಿದ್ದು, ಸತ್ಯರಾಜ್ ತಮ್ಮ ಹೇಳಿಕೆಯನ್ನು ವಾಪಸ್ ತೆಗೆದುಕೊಂಡು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಬಾಹುಬಲಿ -1 ಚಿತ್ರ ಅಭೂತಪೂರ್ವ ಯಶಸ್ಸು ಕಂಡಿದ್ದು, ಬಾಕ್ಸಾಫೀಸ್ ದಾಖಲೆ ಮಾಡಿತ್ತು. ಬಾಹುಬಲಿ-2 ಚಿತ್ರ ಕೂಡ ಉತ್ತಮ ದಾಖಲೆ ನಿರ್ಮಿಸಬಹುದೆಂದು ನಿರೀಕ್ಷಿಸಿದ್ದ ಸಂದರ್ಭದಲ್ಲೇ ಈ ಕಂಟಕ ಎದುರಾಗಿದೆ.

ಈ ಚಿತ್ರವನ್ನು ರಾಜ್ಯಾದ್ಯಂತ ಯಾವ ಚಿತ್ರಮಂದಿರಗಳಲ್ಲೂ ಪ್ರದರ್ಶಿಸಬಾರದು ಎಂದು ಕನ್ನಡ ಸಂಘಟನೆಗಳು ಆಗ್ರಹಿಸಿವೆ.Post Comments
Name
Email
subject
Comment
 
 

Advertisement

 
School Bangalore
 
SareeBangalore
 
find parlour
 

Gallery

 
bollywood
 
Tollywood
 
sandalwood
 
kollywood
 
 
 
 

Video Gallery