ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2016 ನೇ ಸಾಲಿನ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಹಾಗೂ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಪತ್ರಿಕೋದ್ಯಮ ಕ್ಷೇತ್ರದ ವಿವಿಧ ರಂಗಗಳಲ್ಲಿ ಅನುಪಮ ಸೇವೆ ಸಲ್ಲಿಸಿದ ಸಾಧಕರಿಗೆ ಕರ್ನಾಟಕ ರಾಜ್ಯ ಸರ್ಕಾರ ಟೀಯೆಸ್ಸಾರ್, ಮೊಹರೆ ಹಣಮಂತರಾಯ, ಪರಿಸರ ಪತ್ರಿಕೋದ್ಯಮ ಹಾಗೂ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತದೆ.

ಟೀಯೆಸ್ಸಾರ್ ಪ್ರಶಸ್ತಿ: ಕನ್ನಡ ಪತ್ರಿಕೋದ್ಯಮದಲ್ಲಿ "ಛೂ ಬಾಣ" ದ ಮೂಲಕ ರಾಜಕಾರಣದ ಓರೆ ಕೋರೆಗಳಿಗೆ ಹೊಸ ರೂಪವನ್ನು ನೀಡಿದ ಹಿರಿಯ ಪತ್ರಕರ್ತ ದಿ: ಟಿ.ಎಸ್. ರಾಮಚಂದ್ರರಾವ್ ಅವರು ತಮ್ಮ ಮೊನಚು ಬರಹಗಳಿಂದಲೇ ಓದುಗರ ಹೃದಯವನ್ನು ಗೆದ್ದವರು.

ಕನ್ನಡ ಪತ್ರಿಕೋದ್ಯಮದಲ್ಲಿ ಅನುಪಮ ಸೇವೆ ಸಲ್ಲಿಸುವ ಪತ್ರಕರ್ತರಿಗೆ ಟೀಯೆಸ್ಸಾರ್ ನೆನಪಿನಲ್ಲಿ ಕರ್ನಾಟಕ ಸರ್ಕಾರ 1993 ರಿಂದ ಪ್ರತಿ ವರ್ಷ "ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ" ನೀಡುತ್ತಿದೆ. ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮುದ್ರಣ ಅಥವಾ ವಿದ್ಯುನ್ಮಾನ ಮಾಧ್ಯಮದಲ್ಲಿ ಅಥವಾ ಎರಡರಲ್ಲೂ ಕನಿಷ್ಠ 30 ವರ್ಷ ಸೇವೆ ಸಲ್ಲಿಸಿರಬೇಕು ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಭಾಷೆಯ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಿರಬೇಕು. ಈ ವಾರ್ಷಿಕ ಪ್ರಶಸ್ತಿಯನ್ನು ಕೇವಲ ಒಬ್ಬ ವ್ಯಕ್ತಿಗೆ ಮಾತ್ರ ನೀಡಲಾಗುತ್ತದೆ.

ಪ್ರಶಸ್ತಿಯ ಮೊತ್ತ 1 ಲಕ್ಷ ರೂ. ಆಗಿದ್ದು, ಪ್ರಶಸ್ತಿ ಪತ್ರ, ಫಲಕ ಒಳಗೊಂಡಿರುತ್ತದೆ. ಪತ್ರಕರ್ತರ ಸಂಘಗಳು, ಸಾರ್ವಜನಿಕರು ಹಾಗೂ ಇತರ ಮೂಲಗಳಿಂದ ಟೀಯೆಸ್ಸಾರ್ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಬಹುದಾಗಿದೆ. ಮೊಹರೆ ಹಣಮಂತರಾಯ ಪ್ರಶಸ್ತಿ: ಕನ್ನಡ ಪತ್ರಿಕಾ ರಂಗದ ಭೀಷ್ಮ ಎಂದೇ ಹೆಸರಾದ ಮೊಹರೆ ಹಣಮಂತರಾಯರ ಹೆಸರಿನಲ್ಲಿ ಕರ್ನಾಟಕ ಸರ್ಕಾರವು 2010 ರಿಂದ ನೀಡುತ್ತಾ ಬಂದಿರುವ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ 1.00 ಲಕ್ಷ ರೂ. ಜೊತೆಗೆ ಪ್ರಶಸ್ತಿ ಪತ್ರ, ಫಲಕ ಒಳಗೊಂಡಿದೆ. ಈ ವಾರ್ಷಿಕ ಪ್ರಶಸ್ತಿಯನ್ನು ಕೇವಲ ಒಬ್ಬ ವ್ಯಕ್ತಿಗೆ ಮಾತ್ರ ನೀಡಲಾಗುತ್ತಿದ್ದು ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮುದ್ರಣ ಅಥವಾ ವಿದ್ಯುನ್ಮಾನ ಮಾಧ್ಯಮದಲ್ಲಿ ಅಥವಾ ಎರಡರಲ್ಲೂ ಒಟ್ಟಿಗೆ ಕನಿಷ್ಠ 30 ವರ್ಷ ಸೇವೆ ಸಲ್ಲಿಸಿರಬೇಕು ಹಾಗೂ ಕನ್ನಡ ಪತ್ರಿಕೋದ್ಯಮ ಕ್ಷೇತ್ರ ಭಾಷೆಯ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಿರಬೇಕು. ಪತ್ರಕರ್ತರ ಸಂಘಗಳು, ಸಾರ್ವಜನಿಕರು ಹಾಗೂ ಇತರ ಮೂಲಗಳಿಂದ ಮೊಹರೆ ಹಣಮಂತರಾಯ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಬಹುದಾಗಿದೆ.

ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳು: ರಾಜ್ಯದೆಲ್ಲೆಡೆ ಅಭಿವೃದ್ಧಿಗೆ ಉತ್ತಮ ವಾತಾವರಣ ಕಲ್ಪಿಸಲು ಅನುಕೂಲವಾಗುವಂತೆ ಉತ್ತೇಜಿಸಲು ಅಭಿವೃದ್ಧಿ ಪತ್ರಿಕೋದ್ಯಮ ಹಾಗೂ ರಾಜ್ಯದಲ್ಲಿನ ಪರಿಸರ, ಪ್ರಕೃತಿ ಹಾಗೂ ನಿಸರ್ಗದ ಸಮತೋಲನ ಕಾಯ್ದುಕೊಳ್ಳಲು ನೆರವಾಗಿರುವ ಪತ್ರಕರ್ತರಿಗಾಗಿ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ.

ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸುವವರು ಮುದ್ರಣ ಮಾಧ್ಯಮ ಅಥವಾ ವಿದ್ಯುನ್ಮಾನ ಮಾಧ್ಯಮ ಕ್ಷೇತ್ರಗಳಲ್ಲಿ ಕನಿಷ್ಠ 10 ವರ್ಷ ಅನುಭವ ಹೊಂದಿರುವ ಪತ್ರಕರ್ತರು ಅರ್ಹರಾಗಿರುತ್ತಾರೆ. ಪ್ರಶಸ್ತಿ ತಲಾ 50,000/- ರೂ. ಪ್ರಶಸ್ತಿ ಪತ್ರ, ಫಲಕ ಒಳಗೊಂಡಿರುತ್ತದೆ. ಈ ಪ್ರಶಸ್ತಿಗಳಿಗೆ ಪತ್ರಿಕಾ ಸಂಘಟನೆಗಳು ಮತ್ತು ಸಂಘ ಸಂಸ್ಥೆಗಳು ನಾಮ ನಿರ್ದೇಶನಗಳನ್ನು ಮಾಡಬಹುದು. ಅಲ್ಲದೆ ಅಭ್ಯರ್ಥಿಗಳೇ ನೇರವಾಗಿ ಅರ್ಜಿಸಲ್ಲಿಸಲು ಅವಕಾಶವಿದೆ. ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾಸೌಧ, ನಂ. 17, ಭಗವಾನ್ ಮಹಾವೀರ್ ರಸ್ತೆ, ಬೆಂಗಳೂರು - 560 001 ಇಲ್ಲಿಗೆ ಮಾರ್ಚ್ 25 ರೊಳಗಾಗಿ ಕಳುಹಿಸಿಕೊಡಬಹುದಾಗಿದೆ.Post Comments
Name
Email
subject
Comment
 
 

Advertisement

 
School Bangalore
 
SareeBangalore
 
find parlour
 

Gallery

 
bollywood
 
Tollywood
 
sandalwood
 
kollywood
 
 
 
 

Video Gallery