ಸ್ಕೂಟಿಗೆ ಬಸ್ ಡಿಕ್ಕಿ: ಅಕ್ಕ, ತಮ್ಮನ ದಾರುಣ ಸಾವು

ಚಿಕ್ಕಬಳ್ಳಾಪುರ: ಸ್ಕೂಟಿಗೆ ವೇಗವಾಗಿ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಅಕ್ಕ ಮತ್ತು ತಮ್ಮ ಇಬ್ಬರೂ ಸಾವನ್ನಪ್ಪಿದ ದಾರುಣ ಘಟನೆ ಶಿಡ್ಲಘಟ್ಟದ ಜಿ. ವೆಂಕಟಾಪುರ ಗ್ರಾಮದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಮೃತರಾದವರು ಭಾಗ್ಯಮ್ಮ ಹಾಗೂ ಅವರ ಸಹೋದರ ಮುರಳಿ. ಭಾಗ್ಯಮ್ಮ ಚಿ.ಪಂ. ಕಚೇರಿಯಲ್ಲಿ ಟೈಪಿಸ್ಟ್ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಎಂದಿನಂತೆ ಮುರಳಿ ತನ್ನ ಅಕ್ಕ ಭಾಗ್ಯಮ್ಮಳನ್ನು ಬಸ್ ನಿಲ್ದಾಣಕ್ಕೆ ಡ್ರಾಪ್ ಮಾಡಲು ಸ್ಕೂಟಿಯಲ್ಲಿ ತೆರಳಿದ್ದಾಗ ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹೊಂಡವೊಂದನ್ನು ತಪ್ಪಿಸುವ ಸಲುವಾಗಿ ಎಡದಿಂದ ಬಲಕ್ಕೆ ವಾಹನ ತಿರುಗಿಸಿದ್ದರಿಂದ ಸ್ಕೂಟಿಗೆ ಡಿಕ್ಕಿ ಹೊಡೆಯಿತು.

ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯ ಪಕ್ಕ ಉರುಳಿಬಿದ್ದ ಅಕ್ಕ-ತಮ್ಮ ಇಬ್ಬರೂ ಸ್ಥಳದಲ್ಲೇ  ಮೃತಪಟ್ಟಿದ್ದಾರೆ. ಸ್ಕೂಟಿ ಬಸ್ ಕೆಳಭಾಗದಲ್ಲಿ ಸಿಕ್ಕಿಕೊಂಡು ಜಜ್ಜಿಹೋಗಿದೆ. ಈ ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು  ಕೋಲಾರ-ವಿಜಯಪುರ-ಚಿಕ್ಕಬಳ್ಳಾಪುರ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಬಸ್ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಹೆಚ್ಚಿನ ತನಿಖೆ ನಡೆಸಿದ್ದಾರೆ.Post Comments
Name
Email
subject
Comment
 
 

Advertisement

 
School Bangalore
 
SareeBangalore
 
find parlour
 

Gallery

 
bollywood
 
Tollywood
 
sandalwood
 
kollywood
 
 
 
 

Video Gallery