ಇಂದಿನಿಂದ ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳು ಸುಗಮವಾಗಿ ನಡೆಯಲು ಕ್ರಮ: ತನ್ವೀರ್ ಸೇಠ್

ಇಂದಿನಿಂದ ಆರಂಭವಾಗಲಿರುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳು ಸುಗಮವಾಗಿ ನಡೆಯಲಿದ್ದು ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ತಿಳಿಸಿದರು.

ವಿಧಾನ ಸೌಧದ ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಸಚಿವರು ಈಗಾಗಲೇ ನಿಗದಿಪಡಿಸಿರುವಂತೆಯೇ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಕಾರ್ಯಗಳು ನಡೆಯಲಿವೆ. ಈ ಕರ್ತವ್ಯಕ್ಕೆ ನಿಯೋಜಿಸಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಪರೀಕ್ಷೆ ಹಾಗೂ ಮೌಲ್ಯ ಮಾಪನ ಬಹಿಷ್ಕರಿಸುವಂತಹ ಚಟುವಟಿಕೆಗಳಲ್ಲಿ ತೊಡಗಿದ್ದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಸಚಿವರು ಪ್ರಕಟಿಸಿದರು. 

ತಮ್ಮನ್ನು ಭೇಟಿ ಮಾಡಿದ ಐದು ಬೋಧಕ ಸಿಬ್ಬಂದಿ ಸಂಘಗಳ ಪ್ರತಿನಿಧಿಗಳು ಇಂದಿನಿಂದ ನಡೆಯುವ ಪರೀಕ್ಷೆಗಳು ಹಾಗೂ ಮೌಲ್ಯಮಾಪನಗಳನ್ನು ನಿಗದಿ ಅವಧಿಯೊಳಗೆ ಪೂರ್ಣಗೊಳಿಸುವುದಾಗಿ ತಿಳಿಸಿದ್ದು ಇದರಲ್ಲಿ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಕಾಲೇಜುಗಳ ಸಂಘಟನೆಗಳ ಪ್ರತಿನಿಧಿಗಳು ಹಾಜರಿದ್ದರು ಎಂದು ಮಾತನಾಡಿದ ಸಚಿವರು ಈ ಬಾರಿಯ ಪರೀಕ್ಷೆಗಳು ಯಾವುದೇ ಗೊಂದಲಗಳಿಲ್ಲದೆ ನಡೆಯಲಿದೆ ಅಲ್ಲದೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು. ಏಳನೇ ವೇತನ ಆಯೋಗ ಮಾಡಲು ಸರ್ಕಾರ ನಿರ್ಧರಿಸಿದ್ದು, ಆ ಸಮಯದಲ್ಲಿ ಶಿಕ್ಷಕರು ಹಾಗೂ ಉಪನ್ಯಾಸಕರ ನಡುವಿನ ವೇತನ ತಾರತಮ್ಯ ನಿವಾರಿಸಲು ಸರ್ಕಾರ ಕ್ರಮ ಕೈಗೊಳ್ಳಲ್ಲಿದ್ದು ಈ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ಮಾತುಕತೆ ನಡೆಸಲಾಗಿದೆ, ಶಿಕ್ಷಕರು ಹಾಗೂ ಉಪನ್ಯಾಸಕರ ಬೇಡಿಕೆಗಳನ್ನು ನಮ್ಮ ಸರ್ಕಾರ ಹಂತ ಹಂತವಾಗಿ ಈಡೇರಿಸಲಿದೆ, ಹಿಂದಿನ ಸರ್ಕಾರಗಳು ಶಿಕ್ಷಕರ ಸಮಸ್ಯೆಗಳನ್ನು ನಿವಾರಿಸಲು ಮುಂದಾಗದಿರುವುದೇ ಇಂದಿನ ಸಮಸ್ಯೆಗಳಿಗೆ ಕಾರಣ ಎಂದರು.

ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಜೊತೆ ಯಾರು ಚೆಲ್ಲಾಟ ಆಡಬಾರದು ಅದಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ನಿಮ್ಮ ಸಮಸ್ಯೆ ಬಗೆಹರಿಸಲು ಸರ್ಕಾರ ಸಿದ್ಧವಿದೆ ಮೌಲ್ಯಮಾಪನ ಹಾಗೂ ಪರೀಕ್ಷೆಗಳನ್ನು ನಿಗದಿತ ಅವಧಿಯಲ್ಲಿ ಶಿಕ್ಷಕ ಸಮುದಾಯ ಸುಗಮವಾಗಿ ನಡೆಸಿಕೊಡಬೇಕು ಎಂದು ಮಾತನಾಡಿದ ಸಚಿವರು ಪೋಷಕರು ಮತ್ತು ವಿದ್ಯಾರ್ಥಿಗಳು ಈ ವಿಚಾರದಲ್ಲಿ ಆತಂಕಪಡುವ ಅಗತ್ಯವಿಲ್ಲ ಎಂದು ಮಾತನಾಡಿದರು.

 

ಇಂದಿನಿಂದ ಆರಂಭವಾಗಲಿರುವ ದ್ವಿತೀಯ ಪಿ.ಯು.ಸಿ. ಪರೀಕ್ಷೆಗೆ 6,84,449 ವಿದ್ಯಾರ್ಥಿಗಳು ಹಾಜರಾಗಲಿದ್ದು ಅದರಲ್ಲಿ 2,58,259 ವಿದ್ಯಾರ್ಥಿಗಳು 2,90,691 ವಿದ್ಯಾರ್ಥಿನಿಯರು ಹಾಗೂ 19 ಮಂದಿ ತೃತೀಯ ಲಿಂಗೀಯರು ಪರೀಕ್ಷೆ ಬರೆಯಲಿದ್ದಾರೆ ಎಂದ ಶಿಕ್ಷಣ ಸಚಿವರು ಈ ಸಂಬಂಧ ರಾಜ್ಯದಲ್ಲಿ 217ರ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು ಅದರಲ್ಲಿ 1714 ಸಾಮಾನ್ಯ 309 ಸೂಕ್ಷ್ಮ 152 ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳೆಂದು ಗುರುತಿಸಲಾಗಿದ್ದು ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ವಿಚಕ್ಷಣಾದಳ ಹಾಗೂ ಸಂಚಾರಿ ವಿಚಕ್ಷಣಾದಳಗಳನ್ನು ರಚಿಸಲಾಗಿದೆ ಎಂದರು ತಿಳಿಸಿದರು. ಪ್ರಶ್ನೆ ಪತ್ರಿಕೆಗಳನ್ನು ಆಯಾ ಜಿಲ್ಲಾ ಕೇಂದ್ರಗಳಿಗೆ ಕಳುಹಿಸುವ ಕಾರ್ಯ ಪೂರ್ಣಗೊಂಡಿದ್ದು ಅವರ ಮೇಲುಸ್ತುವಾರಿಯನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ ಅಲ್ಲದೆ ಪ್ರಶ್ನೆ ಪತ್ರಿಕೆ ಇರುವ ಕಡೆ ಬಯೋಮೆಟ್ರಿಕ್ ವ್ಯವಸ್ಥೆ, ಸಿ.ಸಿ. ಕ್ಯಾಮರಾ ಅಳವಡಿಕೆ ಮತ್ತು ವಿಡಿಯೋ ಚಿತ್ರೀಕರಣ ನಡೆಸಲಾಗುವುದು ಎಂದು ಸಚಿವರು ಹೇಳಿದರು.

ಅದೇ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ತನ್ನದೇ ಆದ ಕಾಲೇಜಿನಲ್ಲಿ ಪರೀಕ್ಷೆ ಬರೆಯುವಂತಿಲ್ಲ ಅಲ್ಲದೆ ಆ ಕಾಲೇಜಿನ ಸಿಬ್ಬಂದಿಗಳನ್ನು ಬೇರೆ ಕಾಲೇಜಿಗೆ ಪರೀಕ್ಷಾ ಕಾರ್ಯಗಳಿಗೆ ನಿಯೋಜಿಸಲಾಗಿದೆ. ಪರೀಕ್ಷೆ ನಡೆಯುವ ಕಾಲೇಜುಗಳ ಹತ್ತಿರ ಸುಮಾರು 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದ್ದು ಆ ವ್ಯಾಪ್ತಿಯಲ್ಲಿ ಹೆಚ್ಚಿನ ಬದಲಾವಣೆಗೆ ಅವಕಾಶ ಇರುವುದಿಲ್ಲ ಹಾಗೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಸಚಿವ ತನ್ವೀರ್ ಸೇಠ್ ಅವರು ತಿಳಿಸಿದರು.Post Comments
Name
Email
subject
Comment
 
 

Advertisement

 
School Bangalore
 
SareeBangalore
 
find parlour
 

Gallery

 
bollywood
 
Tollywood
 
sandalwood
 
kollywood
 
 
 
 

Video Gallery