• 16 October 2018 15:30
Jai Kannada
Jai Kannada
Blog single photo
June 07, 2018

ಮಂಗಳೂರಿನಲ್ಲಿ ಭಾರೀ ಮಳೆ: ಶಾಲೆಗಳಿಗೆ ಇಂದು, ನಾಳೆ ರಜೆ

ಮಂಗಳೂರು: ಮಂಗಳೂರಿನಲ್ಲಿ ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು, ಇಂದು ಸಹ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ಇಂದು ಮತ್ತು ನಾಳೆ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿದ್ದಾರೆ.

ಮಂಗಳೂರಿನಲ್ಲಿ ದಟ್ಟವಾದ ಮೋಡ ಕವಿದ ವಾತಾವರಣವಿದ್ದು, ಯಾವುದೇ ಅಹಿತಕರ ಘಟನೆಗಳಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಕಳೆದ ಬಾರಿ ಮಂಗಳೂರಿನಲ್ಲಿ ಸೈಕ್ಲೋನ್ ಪ್ರಭಾವದಿಂದ ಸುರಿದ ಮಳೆಯಿಂದಾಗಿ ರಸ್ತೆಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿತ್ತು.

 ಮಂಗಳೂರು ನಗರದ ಹಲವೆಡೆ ರಸ್ತೆಗಳು ಜಲಾವೃತವಾಗಿತ್ತು. ಮಳೆಯಿಂದಾಗಿ ಜಲಾವೃತಗೊಂಡ ಶಾಲೆಯೊಂದರ ಮಕ್ಕಳನ್ನು ಬೋಟ್ ಮೂಲಕ ರಕ್ಷಿಸಲಾಗಿತ್ತು. ಬಾಲಕಿಯೊಬ್ಬಳು ನೀರಿನ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಳು. ಗೋಡೆ ಕುಸಿತದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದರು. 
 

Recent Comments

Leave Comments

footer
Top