• 19 March 2019 05:19
Jai Kannada
Jai Kannada
Blog single photo
July 25, 2018

ರಸ್ತೆಯಲ್ಲಿ ನಾಟಿ ಮಾಡಿ ಗ್ರಾಮಸ್ಥರಿಂದ ವಿನೂತನ ಪ್ರತಿಭಟನೆ 

ಮಂಡ್ಯ: ರಸ್ತೆ ದುರಸ್ತಿ ಮಾಡುವಂತೆ ನಾಗನಹಳ್ಳಿ, ಹೆಗ್ಗಡಪುರ ಗ್ರಾಮದ ಗ್ರಾಮಸ್ಥರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರಸ್ತೆಯಲ್ಲಿ ಯಾವ ಮಟ್ಟಿಗೆ ಹಾಳಾಗಿದೆ ಎಂದು ತೋರಿಸಲು ಗ್ರಾಮಸ್ಥರು ರಸ್ತೆ ಮಧ್ಯೆ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳಿಗೆ ಮನವಿ ಮಾಡಿದ್ರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮಹಿಳೆಯರು ರಸ್ತೆ ಮಧ್ಯೆ ನಾಟಿ ಮಾಡಿ ಜನಪ್ರತಿನಿಧಿಗಳ ಗಮನಸೆಳೆಯುವ ಕೆಲಸ ಮಾಡಿದರು.

ಈ ರಸ್ತೆಯಲ್ಲಿ ವಿದ್ಯಾರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಓಡಾಡುತ್ತಿದ್ದಾರೆ. ಕುಟುಂಬದವರಿಗೆ ಆರೋಗ್ಯದಲ್ಲಿ ಏರುಪೇರಾದರೆ ಆಸ್ಪತ್ರೆಗೆ ಈ ರಸ್ತೆಯಲ್ಲಿ ಪ್ರಯಾಣಿಸುವುದು ಕೂಡ ಕಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ನಾಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

Recent Comments

Leave Comments

footer
Top