ಬೆಂಗಳೂರು: ಉಪಮೇಯರ್ ಆಗಿ ಅಧಿಕಾರ ವಹಿಸಿಕೊಂಡ ಮರುದಿನವೇ ರಮೀಳಾ ಉಮಾಶಂಕರ್ ಹಠಾತ್ತಾಗಿ ಹೃದಯಾಘಾತದಿಂದ ನಿಧನರಾಗಿದ್ದು, ಜೆಡಿಎಸ್ ಪಕ್ಷಕ್ಕೆ ಆಘಾತ ಉಂಟುಮಾಡಿದೆ. ಮಾಗಡಿ ರಸ್ತೆಯ ಕಿತ್ತನಗಳ್ಳಿ ತೋಟದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ. ತಾಯಿ ಸಮಾಧಿ ಪಕ್ಕದಲ್ಲೇ ಅವರ ಅಂತ್ಯಸಂಸ್ಕಾರ ನೆರವೇರಲಿದೆ.
ರಮೀಳಾ ಅವರಿಗೆ 44 ವರ್ಷ ವಯಸ್ಸಾಗಿದ್ದು, ಅಕ್ಟೋಬರ್ 4 ರಂದು ರಾತ್ರಿ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. 2015ರಲ್ಲಿ ಕಾವೇರಿಪುರ ವಾರ್ಡ್ನಿಂದ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದ ಅವರು ಸೆ. 28ರಂದು ಉಪಮೇಯರ್ ಆಗಿ ಆಯ್ಕೆಯಾಗಿದ್ದರು
. ಅ.3ರಂದು ಕಚೇರಿಯಲ್ಲಿ ಪೂಜೆ ಸಲ್ಲಿಸಿ ಅಧಿಕಾರ ವಹಿಸಿಕೊಂಡಿದ್ದರು. ಸರ್ಕಾರಿ ಗೌರವಗಳೊಂದಿಗೆ ರಮೀಳಾ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ. ಉಪಮೇಯರ್ ನಿಧನಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದರು. ಉಪಮೇಯರ್ ನಿಧನರಾಗಿರುವ ಹಿನ್ನೆಲೆಯಲ್ಲಿ ಸ್ಥಾಯಿ ಸಮಿತಿ ಚುನಾವಣೆ ಜತೆಗೆ ಉಪಮೇಯರ್ ಚುನಾವಣೆ ಕೂಡ ನಡೆಸುವ ಸಾಧ್ಯತೆಯಿದೆ.
Recent Comments