ಬಾಗಲಕೋಟೆ: ಬಾಗಲಕೋಟೆಯಲ್ಲಿನ ಅಧಿಕಾರಿ ಚಿದಾನಂದ ಮಿಂಚಿನಾಳ ಮನೆ ಮೇಲೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲಿಸಿದರು.
ಬೆಳಗಾವಿಯಲ್ಲೂ ಕೂಡ ಖಾನಾಪುರ ಅರಣ್ಯ ಸಂರಕ್ಷಣಾ ಅಧಿಕಾರಿ ಚಂದ್ರಗೌಡ ಪಾಟೀಲ್ ಎಂಬವರ ಮನೆ ಮೇಲೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ನಗದು, ಬೆಳ್ಳಿ ಚಿನ್ನಾಭರಣಗಳನ್ನು ಪತ್ತೆ ಹಚ್ಚಿದ್ದಾರೆ. ಪಾಟೀಲ್ ಕಚೇರಿ ಮೇಲೂ ದಾಳಿ ನಡೆಸಲಾಗಿದೆ. ಇವರು ಆದಾಯಕ್ಕೆ ಮೀರಿದ ಆಸ್ತಿ ಸಂಪಾದಿಸಿದ್ದಾರೆಂಬ ದೂರನ್ನು ಆಧರಿಸಿ ಎಸಿಬಿ ರೇಡ್ ಮಾಡಿದೆ.
ಚೀಲವೊಂದರಲ್ಲಿ ಅನೇಕ ಆಸ್ತಿಗಳಿಗೆ ಸಂಬಂಧಿಸಿದ ಪತ್ರಗಳು ಸಿಕ್ಕಿವೆ. ಒಂದೇ ಒಂದು ಕೋಣೆಯಲ್ಲಿ ಇಷ್ಟು ದೊಡ್ಡ ಮಟ್ಟದ ನಗದು, ಚಿನ್ನಾಭರಣಗಳು ಸಿಕ್ಕಿದ್ದು, ಇನ್ನೊಂದು ಕೋಣೆಯನ್ನು ಕೂಡ ತೆರೆಯಲು ಎಸಿಬಿ ಅಧಿಕಾರಿಗಳು ನಿರ್ಧರಿಸಿದ್ದಾರೆ.
Recent Comments