Jai Kannada
Jai Kannada
Blog single photo
January 13, 2019

 ಮೋದಿ 'ಕ್ಲರ್ಕ್' ಹೇಳಿಕೆಗೆ ಕಾಂಗ್ರೆಸ್ ಮುಖಂಡರ ಖಾರದ ಪ್ರತಿಕ್ರಿಯೆ 

ಬೆಂಗಳೂರು: ಬಿಜೆಪಿಯ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ತಮ್ಮನ್ನು ಕ್ಲರ್ಕ್ ರೀತಿ ನಡೆಸಿಕೊಳ್ಳುತ್ತಿದೆಯೆಂಬ ಹೇಳಿಕೆ ಉಲ್ಲೇಖಿಸಿ ವ್ಯಂಗ್ಯವಾಡಿದ್ದರು. ನರೇಂದ್ರ ಮೋದಿ ಹೇಳಿಕೆಗೆ ರಾಜ್ಯದ ಅನೇಕ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಪ್ರತಿಕ್ರಿಯಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಇದು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಸಂಬಂಧಿಸಿದ ವಿಷಯ. ಎರಡು ಸಮ್ಮಿಶ್ರ ಪಕ್ಷಗಳ ನಡುವೆ ವಿಷಬೀಜ ಬಿತ್ತಲು ಮೋದಿ ಯತ್ನಿಸಿದ್ದಾರೆಂದು ಅವರು ಆರೋಪಿಸಿದರು.. ಕುಮಾರಸ್ವಾಮಿ ಮಾತ್ರ ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ. ನಾನು ಹೇಳದೇ ಇರುವ ಹೇಳಿಕೆಗೆ ಪ್ರಧಾನಿ ಪ್ರತಿಕ್ರಿಯಿಸಿದ್ದಾರೆ. ಮೋದಿ ನಿರಾಧಾರ ಹೇಳಿಕೆಯಿಂದ ನನಗೆ ಮತ್ತೊಮ್ಮೆ ಆಶ್ಚರ್ಯವಾಗಿದೆ ಎಂದಿದ್ದಾರೆ.

ದೇವೇಗೌಡರು ಮಾತ್ರ ಮೋದಿ ಕ್ಲರ್ಕ್ ಹೇಳಿಕೆಗೆ ಪ್ರತಿಕ್ರಿಯಿಸಿ ಬಿಜೆಪಿ ಜತೆ ಕೈಗೂಡಿಸಿದಾಗಲೂ ಇದೇ ಕಹಿ ಅನುಭವವಾಗಿತ್ತು. ಸಿಎಂ ಬಗ್ಗೆ ತಮ್ಮ ಅನುಕೂಲಕ್ಕೆ ತಕ್ಕಂತೆ ಮೋದಿ ವ್ಯಾಖ್ಯಾನಿಸಿದ್ದಾರೆಂದು ತಿಳಿಸಿದರು. ಪ್ರಧಾನಮಂತ್ರಿ ಹೀಗೆ ರಾಜ್ಯದ ಮುಖ್ಯಮಂತ್ರಿ ಬಗ್ಗೆ ಹಗುರವಾಗಿ ಮಾತನಾಡುವುದು ಶೋಭೆ ತರುವುದಿಲ್ಲ ಎಂದು ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.  ಕೆಪಿಪಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಇಂತಹ ಹೇಳಿಕೆ ನೀಡುವ ಮೂಲಕ ಪ್ರಧಾನಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ತಗ್ಗಿಸಿದ್ದಾರೆ. ಇದು ಹತಾಶೆಯ ಲಕ್ಷಣವಲ್ಲದೇ ಮತ್ತೇನೂ ಅಲ್ಲ ಎಂದಿದ್ದಾರೆ

Recent Comments

Leave Comments

footer
Top