• 19 April 2019 19:59
Jai Kannada
Jai Kannada
Blog single photo
April 04, 2019

 ಮೋದಿ ಆತ್ಮಕಥನ ಪಿಎಂ ನರೇಂದ್ರ ಮೋದಿ ಚಿತ್ರದ ಬಿಡುಗಡೆ ಮುಂದೂಡಿಕೆ 

ಮುಂಬೈ:  ಪ್ರಧಾನಮಂತ್ರಿ ನರೇಂದ್ರ ಮೋದಿ ಆತ್ಮಕಥನವಾದ ಪಿಎಂ ನರೇಂದ್ರ ಮೋದಿ ಚಿತ್ರದ ಬಿಡುಗಡೆಯನ್ನು ಮುಂದಿನ ಸೂಚನೆವರೆಗೆ ಮುಂದೂಡಲಾಗಿದೆ ಎಂದು ನಿರ್ಮಾಪಕ ಸಂದೀಪ್ ಸಿಂಗ್ ಗುರುವಾರ ತಿಳಿಸಿದ್ದಾರೆ.

 ಟ್ವಿಟರ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಸಿಂಗ್ , ಏಪ್ರಿಲ್ 5ರಂದು ಬಿಡುಗಡೆಯಾಗಬೇಕಿದ್ದ ಚಿತ್ರದ ಪ್ರದರ್ಶನವನ್ನು ಅನಿರ್ದಿಷ್ಟ ಕಾಲದವರೆಗೆ ಮುಂದೂಡಲಾಗಿದೆ ಎಂದಿದ್ದಾರೆ.

ಏಪ್ರಿಲ್ 5ರಂದು ಚಿತ್ರದ ಬಿಡುಗಡೆ ವಿರುದ್ಧ ಕಾಂಗ್ರೆಸ್ ಚುನಾವಣೆ ಆಯೋಗಕ್ಕೆ ದೂರನ್ನು ಸಲ್ಲಿಸಿತ್ತು.ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು, ಈ ಚಿತ್ರ ಬಿಡುಗಡೆಯಿಂದ ಬಿಜೆಪಿಯಿಂದ ಚುನಾವಣೆಯಲ್ಲಿ ಅನುಚಿತ ಅನುಕೂಲವಾಗುತ್ತಾದ್ದರಿಂದ. ಚುನಾವಣೆ ಮುಗಿದ ಮೇಲೆ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿತ್ತು.

Recent Comments

Leave Comments

footer
Top