• 19 April 2019 20:01
Jai Kannada
Jai Kannada
Blog single photo
April 14, 2019

ಲಾರಿ ಹಾಗೂ ಕ್ಯಾಂಟರ್ ಡಿಕ್ಕಿ : ಸ್ಥಳದಲ್ಲೇ ಮೂವರ ಸಾವು 

ಬೆಂಗಳೂರು: ಆನೇಕಲ್ ತಾಲೂಕಿನ ತಿರುಮಗೊಂಡನಹಳ್ಳಿಯಲ್ಲಿ ಲಾರಿ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ದುರಂತ ಸಂಭವಿಸಿದೆ.

ಈ ಘಟನೆಯಲ್ಲಿ ಇನ್ನೂ ಮೂವರು ಗಂಭೀರ ಗಾಯಗೊಂಡಿದ್ದಾರೆ. ಕ್ಯಾಂಟರ್ ಟೈರ್ ಸ್ಫೋಟಗೊಂಡು ಡಿವೈಡರ್ ದಾಟಿ  ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುತ್ತಿದ್ದ ಲಾರಿಗೆ ಡಿಕ್ಕಿಹೊಡೆದಿದೆ.

ಡಿಕ್ಕಿಹೊಡೆದ ರಭಸಕ್ಕೆ ಕ್ಯಾಂಟರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಅಸುನೀಗಿದ್ದಾರೆ. ಲಾರಿ ಚಾಲಕ ಹಾಗೂ ಕ್ಯಾಂಟರ್‌ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಮೃತಪಟ್ಟವರ ಬಗ್ಗೆ ಯಾವುದೇ ವಿವರ ಲಭ್ಯವಾಗಿಲ್ಲ. ಸೂರ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Recent Comments

Leave Comments

footer
Top