• 19 April 2019 20:13
Jai Kannada
Jai Kannada
Blog single photo
April 14, 2019

ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸದಿದ್ದರೆ ಸರ್ಕಾರ ಉಳಿಯುತ್ತಾ: ಸಿದ್ದರಾಮಯ್ಯ ಸ್ಫೋಟಕ ಪ್ರಶ್ನೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಜೈಪುರದಲ್ಲಿ ಚುನಾವಣೆ ಸಮಾವೇಶದಲ್ಲಿ ಮಾತನಾಡುತ್ತಾ ನಮ್ಮ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸದಿದ್ದರೆ ಸರ್ಕಾರ ಉಳಿಯುತ್ತಾ ಎಂದು ಕೇಳುವ ಮೂಲಕ ಚುನಾವಣೆ ನಂತರ ಈ ಸರ್ಕಾರ ಹೆಚ್ಚು ಕಾಲ ಉಳಿಯುವ ಸಾಧ್ಯತೆ ಕಡಿಮೆ ಎಂದು  ಜೆಡಿಎಸ್‌ಗೆ ಪರೋಕ್ಷವಾಗಿ ಬೆದರಿಕೆಯನ್ನೂ ಹಾಕಿದ್ದಾರೆ.

ಮೈಸೂರಿನಲ್ಲಿ ವಿಜಯಶಂಕರ್ ಅವರು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ನಿಂತಿದ್ದಾರೆ. ಮೈಸೂರಿನ ಹಾಲಿ ಸಂಸದ ಪ್ರತಾಪ್ ಸಿಂಹ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಮೈಸೂರಿನಲ್ಲಿ ಶತಾಯಗತಾಯ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕೆಂದು ಸಿದ್ಧರಾಮಯ್ಯ ಹಠಕ್ಕೆ ಬಿದ್ದಿದ್ದಾರೆ. ಹೀಗಾಗಿ ಮೈಸೂರಿನಲ್ಲಿ ಭರ್ಜರಿ ರೋಡ್ ಶೋ ಕೂಡ ನಡೆಸಿ ಸಿದ್ದರಾಮಯ್ಯ ಅಭೂತಪೂರ್ವ ಪ್ರಚಾರ ಕೈಗೊಂಡಿದ್ದಾರೆ. ಆದರೆ ಕೊಡಗು-ಮೈಸೂರು ಕ್ಷೇತ್ರದಲ್ಲಿ ಗೆಲುವು ಜೆಡಿಎಸ್ ಸಂಪೂರ್ಣ ಬೆಂಬಲದ ಮೇಲೆ ನಿಂತಿದೆ. ಜೆಡಿಎಸ್ ಮೈತ್ರಿ ಅಭ್ಯರ್ಥಿ ಪರ ನಿರ್ಲಕ್ಷ್ಯದ ಧೋರಣೆ ವಹಿಸಿದರೆ ಕಾಂಗ್ರೆಸ್ ಅಭ್ಯರ್ಥಿ ಸೋಲುವ ಸಾಧ್ಯತೆ ತಳ್ಳಿಹಾಕುವಂತಿಲ್ಲ.

ಅಂತಹ ಸಂದರ್ಭದಲ್ಲಿ ಈ ಸರ್ಕಾರ ಉಳಿಯುತ್ತಾ ಎಂದು ಸಿದ್ದರಾಮಯ್ಯ ಜೆಡಿಎಸ್ ಮುಖಂಡರಿಗೆ ಮತ್ತು ಸದಸ್ಯರಿಗೆ ಮೈತ್ರಿ ಅಭ್ಯರ್ಥಿ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವಂತೆ ಪರೋಕ್ಷ ಸಂದೇಶ ನೀಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಚುನಾವಣೆಯಲ್ಲಿ ಸೋತಿದ್ದ ಸಿದ್ದರಾಮಯ್ಯ ತಾವು ಇನ್ನು ಮುಂದೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಲ್ಲುವುದಿಲ್ಲ ಎಂದೂ ಶಪಥ ಮಾಡಿದ್ದಾರೆ. 

Recent Comments

Leave Comments

footer
Top