• 19 August 2018 05:12
Jai Kannada
Jai Kannada
Blog single photo
January 09, 2018

ಶರ್ಟ್ ಹರಿದುಕೊಂಡು ಪ್ರತಿಭಟನೆ ನಡೆಸಿದ ಕರವೇ ಯುವಸೇನೆ

ಕೊಪ್ಪಳ: ಕೊಪ್ಪಳದಲ್ಲಿ ಶರ್ಟ್ ಹರಿದುಕೊಂಡು ವಿನೂತನ ರೀತಿಯಲ್ಲಿ  ಕರವೇ ಯುವಸೇನೆ ಪ್ರತಿಭಟನೆ ನಡೆಸಿದೆ.

ವಿಜಯಪುರದಲ್ಲಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ ಅವರು ಪ್ರತಿಭಟನೆ ನಡೆಸುತ್ತಿದ್ದಾಗ, ರೈಲ್ವೆ ನಿಲ್ದಾಣದೊಳಕ್ಕೆ ನುಗ್ಗಲು ಯತ್ನಿಸಿದ ಪ್ರತಿಭಟನೆಕಾರರನ್ನು ಪೊಲೀಸರು ತಡೆದಿದ್ದರು.

ಪೊಲೀಸರು ಅವಕಾಶ ನಿರಾಕರಿಸಿದ್ದಕ್ಕೆ ವಿನೂತನ ರೀತಿಯಲ್ಲಿ ಅಂಗಿ ಹರಿದುಕೊಂಡು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಹಾಗೂ ಕೇಂದ್ರಸರ್ಕಾರಗಳು ಮಹಿಳೆಯರಿಗೆ ಸೂಕ್ತ ರೀತಿಯಲ್ಲಿ ರಕ್ಷಣೆ ಕೊಡುವಲ್ಲಿ ವಿಫಲವಾಗಿದೆ ಎಂದು ಅವರು ಖಂಡಿಸಿದರು. ಸುಮಾರು 60ಕ್ಕೂ ಹೆಚ್ಚು ಸಂಘಟನೆಗಳು ಕೊಪ್ಪಳದಲ್ಲಿ ಬಂದ್‌ಗೆ ಕರೆ ನೀಡಿದ್ದವು. 
 

Recent Comments

Leave Comments

footer
Top