• 23 September 2019 04:20
Jai Kannada
Jai Kannada
Blog single photo
June 10, 2019

ನಾಟಕಕಾರ, ಚಿತ್ರ ನಿರ್ದೇಶಕ , ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ವಿಧಿವಶ 

ಬೆಂಗಳೂರು: ನಾಟಕಕಾರ, ಸಾಹಿತಿ ಚಲನಚಿತ್ರ ನಿರ್ದೇಶಕ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್(81) ಇಂದು ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ನರಳುತ್ತಿದ್ದ ಗಿರೀಶ್ ಕಾರ್ನಾಡ್ ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ ನಿವಾಸದಲ್ಲಿ ಮೃತಪಟ್ಟಿದ್ದಾರೆ. 

ಮಹಾರಾಷ್ಟ್ರದ ಮಥೇರಾನ್‌ನಲ್ಲಿ ಜನಿಸಿದ್ದ ಗಿರೀಶ್ ಕಾರ್ನಾಡ್ ರಘುನಾಥ್ , ಕೃಷ್ಣಬಾಯಿ ದಂಪತಿಯ ಪುತ್ರ. ಕರ್ನಾಟಕದ ಶಿರಸಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಕಾರ್ನಾಡ್ ಧಾರವಾಡದ ಕರ್ನಾಟಕ ವಿವಿಯಲ್ಲಿ ಗಣಿತ ಮತ್ತು ಸಂಖ್ಯಾಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಪದವಿ ಗಳಿಸಿದ್ದರು. ರಾಜ್ಯಶಾಸ್ತ್ರ, ತತ್ವಶಾಸ್ತ್ರ ಮತ್ತು ಅರ್ಥಶಾಸ್ತ್ರ ಅಧ್ಯಯನ ಮಾಡಿದ್ದಾರೆ.  1938 ಮೇ 19ರಂದು ಗಿರೀಶ್ ಕಾರ್ನಾಡ್ ಜನಿಸಿದ್ದರು.

ಅವರ ಅಂತ್ಯಸಂಸ್ಕಾರವನ್ನು ಯಾವುದೇ ಧಾರ್ಮಿಕ ವಿಧಿವಿಧಾನಗಳಿಲ್ಲದೇ ನಡೆಸುವುದು ಕಾರ್ನಾಡ್ ಇಚ್ಛೆಯಾಗಿದ್ದರಿಂದ ಅವರ ಇಚ್ಛೆಯಂತೆ ಯಾವುದೇ ಧಾರ್ಮಿಕ ವಿಧಿವಿಧಾನಗಳಿಲ್ಲದೇ ಕಲ್ಪಳ್ಳಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಸಲಾಗುತ್ತಿದೆ. ಅವರ ನಿವಾಸದಲ್ಲಿ ಕೂಡ ಅಂತಿಮ ದರ್ಶನಕ್ಕೆ ಯಾವುದೇ ವ್ಯವಸ್ಥೆ ಮಾಡುವುದಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ. ಗಿರೀಶ್ ಕಾರ್ನಾಡ್ ಅವರ ಮೊದಲ ಸಾಹಿತ್ಯ ಕೃತಿ ಯಯಾತಿ ನಾಟಕ. ಇಂಗ್ಲೆಂಡಿನಿಂದ ಮರಳಿದ ಬಳಿಕ ತುಘಲಕ್ ಹಾಗೂ ಹಯವದನ ಪ್ರಕಟವಾದವು. ಗಿರೀಶ್ ಕಾರ್ನಾಡ್ ಕಾಡು, ಸಂಸ್ಕಾರ, ವಂಶವೃಕ್ಷ, ತಬ್ಬಲಿಯು ನೀನಾದ ಮಗನೆ, ಒಂದಾನೊಂದು ಕಾಲದಲ್ಲಿ ಚಿತ್ರಗಳನ್ನು ನಿರ್ದೇಶಿಸಿದರು,.

 ಗಿರೀಶ್ ಕಾರ್ನಾಡ್ ಕನ್ನಡ ನವ್ಯಸಾಹಿತ್ಯಕ್ಕೆ ನೀಡಿದ ಕೊಡುಗೆ ಸ್ಮರಣೀಯವಾದುದು. ಅವರ ನಿಧನಕ್ಕೆ ರಾಜಕಾರಣಿಗಳು, ಚಲನಚಿತ್ರರಂಗದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Recent Comments

Leave Comments

footer
Top