ಚಿಕ್ಕೋಡಿ: ಖಾಸಗಿ ಬಸ್ ಮತ್ತು ಲಾರಿ ನಡುವೆ ಸತಾರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಾರಾಷ್ಟ್ರದ ನಾಲ್ವರು ಪ್ರಯಾಣಿಕರು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸತ್ತಿದ್ದು 20 ಮಂದಿಗೆ ತೀವ್ರ ಗಾಯಗಳಾಗಿವೆ.
ಗುರುವಾರ ಮುಂಜಾನೆ ಈ ಅಪಘಾತ ಸಂಭವಿಸಿದ್ದು, ಮುಂಬೈನಿಂದ ಬೆಳಗಾವಿಗೆ ತೆರಳುತ್ತಿದ್ದ ಎಸ್ಆರ್ಎಸ್ ಖಾಸಗಿ ಬಸ್, ಲಾರಿಯೊಂದಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಬಸ್ಸಿನ ಮುಂಭಾಗ ಅಪಘಾತದಿಂದ ಸಂಪೂರ್ಣ ಜಜ್ಜಿಹೋಗಿದೆ.
ಮೃತರಲ್ಲಿ ಮೂವರು ಬೆಳಗಾವಿ ಮೂಲದವರಾಗಿದ್ದು, ಅವರನ್ನು ಅಬ್ಬಾಸಾ, ವಿಶ್ವನಾಥ್ ಮತ್ತು ರವೀಂದ್ರ ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಬಸ್ಸಿನಿಂದ ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಸತಾರಾ ಪೊಲೀಸರು ತನಿಖೆ ನಡೆಸಿದ್ದಾರೆ.
Recent Comments