• 23 January 2020 23:21
Jai Kannada
Jai Kannada
Blog single photo
December 09, 2019

ಕಾಂಗ್ರೆಸ್‌, ಜೆಡಿಎಸ್ ಹೀನಾಯ ಸೋಲು: ಬಿಜೆಪಿ ಜಯಭೇರಿಯತ್ತ ದಾಪುಗಾಲು 


ಬೆಂಗಳೂರು:ರಾಜ್ಯದ 15 ಕ್ಷೇತ್ರಗಳಲ್ಲಿ ಉಪಚುನಾವಣೆಯ ಮತಎಣಿಕೆ ಕಾರ್ಯ ಮುಂದುವರಿದಿದ್ದು ಬಿಜೆಪಿ ಪಕ್ಷ ಬಹುತೇಕ ಕ್ಷೇತ್ರಗಳಲ್ಲಿ ಗೆಲುವಿನತ್ತ ದಾಪುಗಾಲು ಹಾಕಿದ್ದು, ಕೆಲವು ಕ್ಷೇತ್ರಗಳಲ್ಲಿ ಈಗಾಗಲೇ ಜಯಗಳಿಸಿದೆ. ಚುನಾವಣೆ ಆಯೋಗದ ಅಧಿಕೃತ ಪ್ರಕಟಣೆಯಷ್ಟೇ ಹೊರಬರಬೇಕಿದೆ. ಉಳಿದಂತೆ ಕಾಂಗ್ರೆಸ್ 2 ಕ್ಷೇತ್ರ ಮತ್ತು ಇತರರು ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದು, ಜೆಡಿಎಸ್ ಒಂದು ಸ್ಥಾನದಲ್ಲೂ ಮುನ್ನಡೆ ಸಾಧಿಸದೇ ಶೂನ್ಯ ಫಲಿತಾಂಶ ಗಳಿಸುವ ಲಕ್ಷಣ ತೋರಿಸಿದೆ.

ಗೋಕಾಕ್ ಕ್ಷೇತ್ರದ ರಮೇಶ್ ಜಾರಕಿಹೊಳಿ ಗೆಲುವಿನ ನಾಗಾಲೋಟದಲ್ಲಿ ಮುಂದುವರಿದಿದ್ದು,  ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಗೆಲುವಿನತ್ತ ದಾಪುಗಾಲು ಹಾಕಿದ್ದಾರೆ. ಕೆ.ಆರ್. ಪೇಟೆ ಕ್ಷೇತ್ರದಲ್ಲಿ ನಾರಾಯಣ ಗೌಡ ಗೆಲುವು ಸಾಧಿಸಿದ್ದಾರೆ. ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಅವರಿಗೆ ಗೆಲುವಾಗಿದೆ. ಗೋಕಾಕ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ 65402 ಮತಗಳ ಮುನ್ನಡೆ ಸಾಧಿಸಿದ್ದು ಗೆಲುವಿನತ್ತ ದಾಪುಗಾಲು ಹಾಕಿದ್ದಾರೆ. ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಗೆಲುವಿನತ್ತ ಹೆಜ್ಜೆಹಾಕಿದ್ದಾರೆ.

33, 6720 ಮತಗಳ ಅಂತರದಲ್ಲಿ ಕುಮಟಳ್ಳಿ ಮುನ್ನಡೆ ಸಾಧಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯ ಸುಧಾಕರ್ ಗೆಲುವು ಸಾಧಿಸಿದ್ದಾರೆ. ಕೆ.ಆರ್. ಪೇಟೆ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಗೆಲುವು ಸಾಧಿಸಿದ್ದಾರೆ.ಯಶವಂತಪುರ ಕ್ಷೇತ್ರದಲ್ಲಿ ಸೋಮಶೇಖರ್ ಗೆಲುವು ಸಾಧಿಸಿದ್ದಾರೆ. ಈ ಮತಎಣಿಕೆ ಫಲಿತಾಂಶಗಳಿಂದ ಬಿಜೆಪಿ ಒಟ್ಟು 12 ಕ್ಷೇತ್ರಗಳಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿದ್ದು, ಅಧಿಕಾರದ ಗದ್ದುಗೆಯನ್ನು ಉಳಿಸಿಕೊಂಡಿದ್ದಾರೆ.

ರಾಣೆಬೆನ್ನೂರು ಕ್ಷೇತ್ರದಲ್ಲಿ ಕೋಳಿವಾಡ ಮತ್ತೆ ಮುಗ್ಗರಿಸಿದ್ದು, ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಭರ್ಜರಿ ಜಯಗಳಿಸಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ್ 36 ಸಾವಿರ ಮತಗಳ ಅಂತರದಿಂದ ಜಯಗಳಿಸಿದ್ದಾರೆ.

Recent Comments

Leave Comments

footer
Top