Jai Kannada
Jai Kannada
Blog single photo
February 15, 2018

ಮೂವರು ಕಾರ್ಮಿಕರ ದಾರುಣ ಸಾವು

ಬೆಂಗಳೂರು: ಬೆಂಗಳೂರಿನ ಸರ್ಜಾಪುರದ ಕಸುವನಹಳ್ಳಿ ಬಳಿ ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡವನ್ನು ವಸತಿ ಉದ್ದೇಶಕ್ಕೆ ನಿರ್ಮಿಸಲಾಗಿತ್ತು.

ಬಳಿಕ ವಾಣಿಜ್ಯ ಉದ್ದೇಶಕ್ಕಾಗಿ ನವೀಕರಣ ಮಾಡಲಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದೆ.

ಈ ಕಟ್ಟಡವು ರಫೀಕ್ ಎಂಬವರಿಗೆ ಸೇರಿದೆ. ಅವಶೇಷಗಳಡಿಯಲ್ಲಿ ಸಿಕ್ಕಿಬಿದ್ದು, ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಅವಶೇಷಗಳಡಿಯಿಂದ ಒಟ್ಟು ಏಳು ಜನರನ್ನು ರಕ್ಷಿಸಲಾಗಿದೆ. ಈ ಕಟ್ಟಡವು ರಫೀಕ್ ಎಂಬವರಿಗೆ ಸೇರಿದ್ದೆಂದು ಹೇಳಲಾಗಿದೆ.

Recent Comments

Leave Comments

footer
Top