• 19 October 2018 12:43
Jai Kannada
Jai Kannada
Blog single photo
February 18, 2018

ರೈತ ಸಂಘದ ಧೀಮಂತ ಹೋರಾಟಗಾರ ಪುಟ್ಟಣ್ಣಯ್ಯ ವಿಧಿವಿಶ 

ಮಂಡ್ಯ: ರೈತ ಸಂಘದ ಏಕೈಕ ಧೀಮಂತ ಹೋರಾಟಗಾರ ಕೆ.ಎಸ್. ಪುಟ್ಟಣ್ಣಯ್ಯ ವಿಧಿವಶರಾಗಿದ್ದಾರೆ. ಮಂಡ್ಯದಲ್ಲಿ ಕಬಡ್ಡಿ ಪಂದ್ಯಾವಳಿ ವೀಕ್ಷಿಸುತ್ತಿದ್ದಾಗ ಹೃದಯಾಘಾತದಿಂದ ಕುಸಿದುಬಿದ್ದಿದ್ದರು.

ಕೂಡಲೇ ಮಿಮ್ಸ್ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಅಸುನೀದಿದ್ದಾರೆ.. ಮಂಡ್ಯ ಜಿಲ್ಲೆ ಮೇಲುಕೋಟೆ ಶಾಸಕರಾದ ಪುಟ್ಟಣ್ಣಯ್ಯ ಅವರಿಗೆ 69 ವರ್ಷಗಳಾಗಿತ್ತು.

ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕು ಕಸಬಾ ಹೋಬಳಿ ಕ್ಯಾತನಹಳ್ಳಿ ಗ್ರಾಮಕ್ಕೆ ಸೇರಿದ ಪುಟ್ಟಣ್ಣಯ್ಯ 1994ರಲ್ಲಿ ಚೊಚ್ಚಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದರು. ಕಳೆದ 20 ವರ್ಷಗಳಿಂದ ರೈತರ ಅಭಿವೃದ್ಧಿಗಾಗಿ ನಿರಂತರ ಹೋರಾಟ ಮಾಡಿದ್ದ ಪುಟ್ಟಣ್ಣಯ್ಯ ಮಂಡ್ಯ ಜಿಲ್ಲೆ ರೈತ ಸಂಘದ ಅಧ್ಯಕ್ಷರಾಗಿದ್ದರು.

Recent Comments

Leave Comments

footer
Top