• 15 December 2017 23:33
Jai Kannada
Jai Kannada
Blog single photo
December 04, 2017

ಚುನಾವಣೆಗೆ ರಾಜ್ಯ ಕಾಂಗ್ರೆಸ್ ರಣತಂತ್ರ 

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಚುನಾವಣೆ ರಣತಂತ್ರವನ್ನು ಹೂಡಿದ್ದು, ಇಂದಿನಿಂದ ಮೂರುಪ ದಿನಗಳ ಕಾಲ ಸರಣಿ ಸಭೆ ಆಯೋಜಿಸಿದೆ.

ರಾಜ್ಯಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಮತ್ತು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಸಭೆಯಲ್ಲಿ ಕೆಲವು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ.

ಈ ಬಾರಿಯೂ ಕಾಂಗ್ರೆಸ್ ಪಕ್ಷ ಬಿಜೆಪಿ, ಜೆಡಿಎಸ್ ಪಕ್ಷಗಳನ್ನು ಮಣಿಸಿ, ಕರ್ನಾಟಕದಲ್ಲಿ ಮತ್ತೆ ಅಧಿಕಾರದ ಗದ್ದುಗೆಗೆ ಏರಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದಕ್ಕಾಗಿ ಇಂದಿರಾ ಕ್ಯಾಂಟೀನ್, ಇಂದಿರಾ ಬಸ್ ಮುಂತಾದ ಜನಪ್ರಿಯ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನರ ಮನಸ್ಸನ್ನು ಗೆಲ್ಲಲು ಹೊರಟಿದೆ. 

Recent Comments

Leave Comments

footer
Top