• 19 November 2018 15:36
Jai Kannada
Jai Kannada
Blog single photo
March 08, 2018

ರಾಜರಾಜೇಶ್ವರಿನಗರ ಕ್ಷೇತ್ರದಿಂದ ಸ್ಪರ್ಧೆಗೆ ಪ್ರಜ್ವಲ್ ರೇವಣ್ಣ ಬಯಕೆ 

ಬೆಂಗಳೂರು: ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಅವರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡುವುದು ಕಗ್ಗಂಟಾಗಿರುವ ನಡುವೆ, ನಾನು ರಾಜರಾಜೇಶ್ವರಿನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಾಕಾಂಕ್ಷಿ ಎಂದು ಹೇಳುವ ಮೂಲಕ ತಮ್ಮ ಮನದಾಸೆ ಹೊರಗೆಡವಿದ್ದಾರೆ.

ರಾಜರಾಜೇಶ್ವರಿ ನಗರದ ಅಭಿವೃದ್ಧಿಯನ್ನು ನಿರ್ಲಕ್ಷಿಸಿದ ಮುನಿರತ್ನ ಅವರನ್ನು ಸೋಲಿಸುವುದೇ ನನ್ನ ಗುರಿಯಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು. ಪ್ರಜ್ವಲ್ ಹೇಳಿಕೆಯಿಂದ ಕುಮಾರಸ್ವಾಮಿ ಅವರಿಗೆ ಇರಿಸುಮುರಿಸಿನ ಸ್ಥಿತಿ ಉಂಟಾಗಿದೆ.

ಚಿತ್ರನಿರ್ಮಾಪಕರೂ ಆಗಿರುವ ಮುನಿರತ್ನ ಅವರ ಕುರುಕ್ಷೇತ್ರ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಅಭಿಮನ್ಯು ಪಾತ್ರ ನಿರ್ವಹಿಸಿದ್ದಾರೆ.
.

Recent Comments

Leave Comments

footer
Top