• 19 October 2018 12:21
Jai Kannada
Jai Kannada
Blog single photo
March 12, 2018

ನವೀನ್ ಕುಮಾರನಿಗೆ ಮಂಪರು ಪರೀಕ್ಷೆಗೆ ಕೋರ್ಟ್ ಅನುಮತಿ 

 ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಕುಮಾರ್ ಅಲಿಯಾಸ್ ಹೊಟ್ಟೆ ಮಂಜನನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಅನುಮತಿ ನೀಡುವಂತೆ ಎಸ್ಐಟಿ ಕೋರಿದ ಹಿನ್ನೆಲೆಯಲ್ಲಿ ಕೋರ್ಟ್ ಅನುಮತಿ ನೀಡಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಹೊಟ್ಟೆ ಮಂಜ ಪ್ರಮುಖ ಪಾತ್ರವಹಿಸಿದ್ದಾನೆಂದು ಮೇಲ್ನೋಟಕ್ಕೆ ಕಂಡುಬಂದಿತ್ತು. ಇಂದು ಬೆಂಗಳೂರಿನ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ಆರೋಪಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸಿದರೆ ಸತ್ಯವನ್ನು ಬಾಯಿಬಿಡುತ್ತಾನೆ ಎಂದು ಎಸ್‌ಐಟಿ ತಂಡ ಕೇಳಿಕೊಂಡ ಹಿನ್ನೆಲೆಯಲ್ಲಿ ಕೋರ್ಟ್ ಮಂಪರು ಪರೀಕ್ಷೆಗೆ ಒಪ್ಪಿಗೆ ನೀಡಿತು.

ಹೊಟ್ಟೆ ಮಂಜನನ್ನು ಮದ್ದೂರಿನ ಬಳಿ ಎಸ್‌ಐಟಿ ತಂಡ ಬಂಧಿಸಿತ್ತು.
 

Recent Comments

Leave Comments

footer
Top